fbpx

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ ತಾಲೂಕಿನ 05 ಅಂಗನವಾಡಿ ಕಾರ್ಯಕರ್ತೆ ಹಾಗೂ 16 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್ 1 ರಿಂದ ಆಗಸ್ಟ್ 31 ರಂದು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10 ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ಅರ್ಜಿಯನ್ನು ಭರ್ತಿಮಾಡಬೇಕು. ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಇತರೇ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ: 08272-295087 ನ್ನು ಸಂಪರ್ಕಿಸಬಹುದು.
ಚೇರಂಗಾಲ-2, ಮರಗೋಡು ಬಕ್ಕ, ಗದ್ದಿಗೆ, ಆವಂದೂರು ಹಾಗೂ ಬೆಟ್ಟತ್ತೂರು ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇದೆ.

ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಕಕ್ಕಬೆ, ಪದಕಲ್ಲು, ಕಿಕ್ಕರೆ, ಮರಗೋಡು ಬಕ್ಕ, ರಾಜೇಶ್ವರಿ ನಗರ, ಜೋಡುಪಾಲ, ಸ್ಟೋನ್‍ಹಿಲ್, ಬಲ್ಲಮಾವಟಿ ಟೌನ್, ಮರಂದೊಡ, ಹೊದವಾಡ ಅಂಬಲ, ಕೊಯನಾಡು-2, ಚೆಡಾವು, ಕುಯ್ಯಂಗೇರಿ, ಮಂಗಳಾದೇವಿ ನಗರ ಹಾಗೂ ಅರ್ವತ್ತೋಕ್ಲು ಕೇಂದ್ರಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಂಧತಿ ಇವರು ತಿಳಿಸಿದ್ದಾರೆ

error: Content is protected !!