fbpx

ಅಕ್ರಮವಾಗಿ ಮದ್ಯ ಮಾರುತ್ತಿದ್ದವನ ಮನೆ ಮೇಲೆ ದಾಳಿ

ಸೋಮವಾರಪೇಟೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕೆಲವು ತಿಂಗಳ ಹಿಂದೆ ಅಬಕಾರಿ ಇಲಾಖೆ ಅಕ್ರಮವಾಗಿ ಮದ್ಯ ಸಂಗ್ರಹಿಸಿ ದುಪಟ್ಟು ದರಕ್ಕೆ ಮಾರಾಟ ಮಾಡುತ್ತಿದ್ದದ್ದನ್ನು ಬೇಧಿಸಿದ್ದ ಬೆನ್ನಲ್ಲೇ ಮತ್ತೆ ತೋಟದ ಮಾಲೀಕರೇ ಮದ್ಯ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ತಂಡ ಕುಂಬೂರಿನ ಮನೆಯೊಂದಕ್ಕೆ ದಾಳಿ ನಡೆಸಿ 30 ಮದ್ಯದ ಪ್ಯಾಕೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯ ಶೆಡ್ಡಿನಲ್ಲಿ ಇಟ್ಟು ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ದಾಳಿ ವೇಳೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪರಾರಿಯಾಗಿದ್ದಾನೆ.

error: Content is protected !!