ಕೊಡಗು ಜಿಲ್ಲೆಯ ಪೊನ್ನಂಪೇಟೆ ಠಾಣಾ ಸರಹದ್ದಿನ ಸುಳುಗೋಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳಗಳನ್ನು ಬೆಳೆದಿದ್ದ ಪ್ರಕರಣವನ್ನು ಪೊನ್ನಂಪೇಟೆ ಠಾಣೆ ಪೊಲೀಸರು ಪತ್ತೆ ಮಾಡಿ ಆರೋಪಿ ಕಿರಣ್ ಎಂಬುವವರನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.