fbpx

ಅಕ್ರಮ ಬೀಟೆ ಮರ ಸಾಗಾಟ:ವಶ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೋಕಿನ ಬಿರುನಾಣಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಬೀಟೆ ಮರ ಕಳ್ಳತನ ಪ್ರಕರಣವನ್ನು

ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳದ ಅಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿರುತ್ತಾರೆ.
ಖಚಿತ ಮಾಹಿತಿ ಮೇರೆ ಡಿಸಿಐಬಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರೀಮಂಗಲ ಠಾಣಾ ವ್ಯಾಪ್ತಿಯ ಬಿರುನಾಣಿ ಗ್ರಾಮದ ನಿವಾಸಿ ಕುಪ್ಪಣ ಮಾಡ ರವೀಂದ್ರ @ ಮಧುರವರ ಕಾಫೀ ತೋಟದಲ್ಲಿ ಬಿದ್ದಿದ್ದ ಬೀಟೆ ಮರವನ್ನು ನಾಟಾಗಳನ್ನಾಗಿ ಮಾಡಿ ಅಕ್ರಮವಾಗಿ ಸಾಗಾಟ ಮಾಡಿ ಉಳಿದಿದ್ದ ಅಂದಾಜು 1 ಲಕ್ಷ ಮೌಲ್ಯದ 5 ಬೀಟೆ ನಾಟಾಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕುಟ್ಟ ಪೂಜೆಕಲ್ಲು ನಿವಾಸಿ ಕುಂಞಪು ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ತೋಟದ ಮಾಲೀಕ ಕುಪ್ಪಣಮಾಡ ರವೀಂದ್ರ ಅಲಿಯಾಸ್ ಮಧು ತಲೆಮರೆಸಿ ಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಇತರ ಆರೋಪಿಗಳ ಶೋಧ ಕಾರ್ಯ ಮುಂದುವರಿದಿದೆ.
ಬಿರುನಾಣಿ ವ್ಯಾಪ್ತಿಯಲ್ಲಿ ನಿರಂತರವಾಗಿ ಬೆಲೆ ಬಾಳುವ ಮರಗಳ ಅಕ್ರಮ ಸಾಗಾಟ ನಡೆಯುತ್ತಿರುವ ಬಗ್ಗೆ ಶಂಕೆಯಿದ್ದು ಈ ಬಗ್ಗೆ ಇಲಾಖೆ ತೀವ್ರ ನಿಗಾ ಇರಿಸಲಾಗಿದೆ.

error: Content is protected !!