fbpx

ಅಜಾದಿ ಕಾ ಅಮೃತ ಮಹೋತ್ಸವ್ ಪ್ರಯುಕ್ತ ನಡೆದ ಅಂತರ್ ಕಾಲೇಜು ಓಟದ ಸ್ಪರ್ಧೆ

ಮಡಿಕೇರಿಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ್ ಪ್ರಯುಕ್ತ ಕೊಡಗು ಜಿಲ್ಲಾಮಟ್ಟದ ಅಂತರ್ ಕಾಲೇಜು ಸ್ವಾತಂತ್ರ್ಯ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು.

ಜಿಲ್ಲಾ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಚಾಲನೆ ದೊರೆತ ಓಟದಲ್ಲಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪುರುಷರ ಓಟದ ಸ್ಪರ್ಧೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಎನ್.ಎಚ್.ಮುರಳಿಧರ್ ಪ್ರಥಮ,ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಸಂದೀಪ್ ದ್ವಿತೀಯ, ಗೋಣಿಕೊಪ್ಪ ಕಾವೇರಿ ಕಾಲೇಜಿನ ಮೋನೀಶ್ ಮೇದಪ್ಪ ತೃತೀಯ ಸ್ಥಾನ ಪಡೆದುಕೊಂಡರು.

ಮಹಿಳೆಯರ ವಿಭಾಗದ ಓಟದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಪ್ಸರೆ ಹೆಚ್.ಎ ಪ್ರಥಮ, ಅದೇ ಕಾಲೇಜಿನ ಧನುಸ್ಸು ಹೆಚ್. ಜಿ ದ್ವಿತೀಯ ಹಾಗು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಿ.ಎನ್ ಚೈತ್ರ ಪಡೆದುಕೊಂಡರು.

error: Content is protected !!