ಅಮೃತ ಜ್ಯೋತಿ ಯೋಜನೆ ರದ್ದಾಗಿಲ್ಲ: ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರಾಜ್ಯ ಸರಕಾರ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಆದರೆ ಈ ಯೋಜನೆಯನ್ನು ರದ್ದುಪಡಿಸಲಾಗಿದೆ ಎನ್ನುವ ಮಾಹಿತಿ ಎಲ್ಲಾ ಕಡೆಗಳಲ್ಲೂ ಹರಿದಾಡುತ್ತಿದ್ದು, ಇದು ತಪ್ಪು ಮಾಹಿತಿ ಎಂದ ಅವರು ಯೋಜನೆಯನ್ನು ಪಡೆದುಕೊಳ್ಳಲು ಕೆಲವೊಂದು ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಈ ನಿಯಮಾವಳಿಗಳನ್ನು ಅನುಸರಿಸಲು ತೊಂದರೆಯಾಗುತ್ತಿದೆ. ಈ ಕಾರಣಕ್ಕಾಗಿ ನಿಯಮಾವಳಿಗಳನ್ನು ರದ್ದುಪಡಿಸಲಾಗಿದೆಯೇ ಹೊರತು ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಅವರು ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಪಷ್ಟಪಡಿಸಿದರು.

error: Content is protected !!