fbpx

ಅಮೇರಿಕಾ ಅಧ್ಯಕ್ಷರ ಸ್ಥಿತಿ ಗಂಭೀರ

ವಾಷಿಂಗ್ಟನ್: ಕೊರೋನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(74) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವೇತಭವನದ ಮುಖ್ಯಸ್ಥ ಮಾರ್ಕ್ ಮೆಡೋಸ್ ಅವರು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯ ಸ್ಥಿತಿ ಅಧಿಕಾರಿಗಳು ಸಾರ್ವಜನಿಕವಾಗಿ ಪ್ರಕಟಿಸಿದಕ್ಕಿಂತ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಅಧ್ಯಕ್ಷರು ಜ್ವರದಿಂದ ಬಳಲುತ್ತಿದ್ದಾರೆ. ಅವರ ರಕ್ತದ ಆಮ್ಲಜನಕ ಮಟ್ಟ ವೇಗವಾಗಿ ಕುಸಿಯುತ್ತಿದೆ ಎಂದು ತಿಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿದ್ದರೂ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ.

error: Content is protected !!