ಅವಕಾಶ ಕೊಡುವುದಾಗಿ ನಂಬಿಸಿ ವಂಚಿಸಿದವನಿಗೆ ಜಾಮೀನು ನೀಡಲು ನಿರಾಕರಣೆ

ಬೆಂಗಳೂರು: ಧಾರಾವಾಹಿಗಳಲ್ಲಿ ಅಭಿನಯಿಸಲು ಅವಕಾಶ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಕಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರಿನ ಪ್ಯಾಲೇಸ್ ಗುಟ್ಟಳ್ಳಿ ನಿವಾಸಿ ಆನಂದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. ಧಾರಾವಾಹಿಯಲ್ಲಿ ಅವಕಾಶ ಕೊಡಿಸುವುದಾಗಿ ಬಾಲಕಿಯನ್ನು ಕರೆದುಕೊಂಡು ಬಂದಿದ್ದ ಆರೋಪಿ ಲಾರ್ಡ್ ನಲ್ಲಿ ಇರಿಸಿ ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದು, ನ್ಯಾಯಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮುಗ್ಧ ಅಪ್ರಾಪ್ತೆಯನ್ನು ದಾರಿ ತಪ್ಪಿಸುವ ಉದ್ದೇಶದಿಂದ ಆರೋಪಿ ಕೃತ್ಯವೆಸಗಿದ್ದು, ಜಾಮೀನು ನೀಡಲು ಯಾವುದೇ ಸಕಾರಣವಿಲ್ಲ ಎಂದು ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

2020 ರ ಮಾರ್ಚ್ 6 ರಂದು ಹಾಸನ ಪೊಲೀಸರಿಗೆ ಅಪ್ರಾಪ್ತೆ ನಾಪತ್ತೆಯಾದ ಬಗ್ಗೆ ತಾಯಿ ಹಾಸನ ಪೊಲೀಸರು ದೂರು ನೀಡಿದ್ದು, ಮಾರ್ಚ್ 10 ರಂದು ಆಕೆಯನ್ನು ಪತ್ತೆ ಮಾಡಿದ್ದ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಆನಂದ್ ಪ್ರೀತಿಸುವುದಾಗಿ ಹೇಳಿ ಧಾರಾವಾಹಿಯಲ್ಲಿ ನಟಿಸಲು ಅವಕಾಶ ಕೊಡಿಸುತ್ತೇನೆ ಎಂದು ಬೆಂಗಳೂರಿಗೆ ಬರುವಂತೆ ತಿಳಿಸಿದ್ದ. ಬಸ್ ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಲಾಡ್ಜ್ ನಲ್ಲಿರಿಸಿದ್ದ ಆರೋಪಿ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಳು. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಕೇಂದ್ರ ಕಾರಾಗೃಹದಲ್ಲಿದ್ದು, ಆತನ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ.

error: Content is protected !!