ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ ಸೆ.13:-ಜಿಲ್ಲೆಯಲ್ಲಿ 2022 ನೇ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ಮಕ್ಕಳನ್ನು ಪ್ರೋತ್ಸಾಹಿಸಲು ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ 4 ವಿಭಾಗದಲ್ಲಿ ತಲಾ 2 ರಂತೆ ಒಟ್ಟು 8 ಪ್ರಶಸ್ತಿ ನೀಡಲಾಗುವುದು. ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ 5 ರಿಂದ 18 ವರ್ಷದೊಳಗಿನ (ಜುಲೈ 31 ಕ್ಕೆ) ಮಕ್ಕಳನ್ನು 2022-23 ನೇ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿದೆ.
ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವುದಾದರೂ ವರ್ಷದಲ್ಲಿ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ, ಪುನಃ ಅದನ್ನು ಪರಿಗಣಿಸಲಾಗುವುದಿಲ್ಲ.
2022-23 ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಸ್ತಾವನೆಯನ್ನು ಸೆಪ್ಟೆಂಬರ್, 30 ರೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9482194105, 9481469149 ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ತಿಳಿಸಿದ್ದಾರೆ.