ಅ.19 ರಂದು ಮಾಜಿ ಸೈನಿಕರ ಕುಂದುಕೊರತೆ ಸಭೆ

ಮಡಿಕೇರಿ ಸೆ.23:-ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನಲ್ಲಿ ವಾಸ್ತವ್ಯವಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು, ಅವರುಗಳ ಯಾವುದೇ ಸಾಮೂಹಿಕ/ ವೈಯಕ್ತಿಕ ಕುಂದುಕೊರತೆಗಳು ಇದ್ದಲ್ಲಿ ಅವುಗಳ ಬಗ್ಗೆ ಚರ್ಚಿಸಲು, ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್, 19 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ತಹಶೀಲ್ದಾರರ ಕಾರ್ಯಾಲಯ ಸಭಾಂಗಣದಲ್ಲಿ ಮಾಜಿ ಸೈನಿಕರ ಕುಂದುಕೊರತೆಗಳ ಸಭೆ ನಡೆಯಲಿದೆ.

ಈ ಬಗ್ಗೆ ಕುಂದುಕೊರತೆಗಳ ಮನವಿಗಳನ್ನು ಸಲ್ಲಿಸುವವರು ಅಕ್ಟೋಬರ್, 13 ರ ಒಳಗೆ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ, ಇವರಿಗೆ ಪತ್ರ ಅಥವಾ ಮಿಂಚಂಚೆ ಇ-ಮೇಲ್ jtdirectordswrmdk@yahoo.com ಮೂಲಕ ಜೊತೆಗೆ ದಾಖಲಾತಿಗಳನ್ನು ಸಲ್ಲಿಸುವಂತೆ ಕೋರಿದೆ.
ಕುಂದುಕೊರತೆ ಸಲ್ಲಿಸುವಾಗ ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿ ಪ್ರತಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವಂತೆ ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯ ಅವರು ತಿಳಿಸಿದ್ದಾರೆ.

error: Content is protected !!