fbpx

ಆಗಸ್ಟ್ 9 ರಂದು SSLC ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಬಿ ಸಿ ನಾಗೇಶ್ ಘೋಷಣೆ

ಆಗಸ್ಟ್ 9ರ ಸೋಮವಾರದಂದು ಮಧ್ಯಾಹ್yನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ.

ಜುಲೈ.19 ಮತ್ತು 22ರಂದು ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 09-08-2021ರ ಸೋಮವಾರ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ತಿಳಿಸಿದರು.

ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ. ಸೋಮವಾರ ಮಧ್ಯಾಹ್ನ 3.30 ಕ್ಕೆ ಎಸ್‌ಎಸ್‌ಎಲ್​ಸಿ ಬೋರ್ಡ್ ನಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ. ಈ ವರ್ಷ ಸುಮಾರು 8.72 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

error: Content is protected !!