ಆನೆ ದಾಳಿ: ಮೃತನ ಕುಟುಂಬಕ್ಕೆ ಪರಿಹಾರ

ಇತ್ತೀಚೆಗೆ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕೂಡ್ಲೂರು ಚೆಟ್ಟಳ್ಳಿಯ ಮಲಕೋಡುವಿನಲ್ಲಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕ ಮಹಮದ್ ಎಂಬಾತನ ಮೇಲೆ ಕಾಡಾನೆ ದಾಳಿ ನಡೆಸಿ,ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ವನ ಕುಟುಂಬಕ್ಕೆ ಸ್ಥಳೀಯ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ರಾಜ್ಯ ಸರ್ಕಾರದಿಂದ ನೀಡಲಾಗುವ ಪರಿಹಾರದ ಚೆಕ್ ಅನ್ನು ಮೃತನ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.