ಆಸ್ಪತ್ರೆಯಿಂದ ಒಳರೋಗಿ ನಾಪತ್ತೆ

ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದ ಪೌರಕಾರ್ಮಿಕರೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಕೂಡುಮಂಗಳೂರಿನ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರಾಗಿದ್ದ ಜನತಾ ಕಾಲೊನಿಯ ನಿವಾಸಿ ರಂಗ (43) ನಾಪತ್ತೆಯಾಗಿರುವ ವ್ಯಕ್ತಿ. ಕಳೆದ 20 ವರ್ಷಗಳಿಂದ ಪೌರಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದ ರಂಗ ಅನಾರೋಗ್ಯ ಕಾರಣ ಈತನ ಪತ್ನಿ ಲತಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೊರಟ ರಂಗ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾನೆ. ಈತನ ಹುಡುಕಾಟ ನಡೆದಿದ್ದು, ಕುಶಾಲನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.