ಆ.15 ರಂದು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

ಮಡಿಕೇರಿ ಆ.13:-ಕೊಡಗು ಜಿಲ್ಲಾಡಳಿತ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ಎಂ.ರವಿಕಾಳಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.