fbpx

ಇಂದಿನಿಂದ ಕೈ ಅದಿನಾಯಕಿ ವಿಚಾರಣೆ: ಕೆಪಿಸಿಸಿ ಪ್ರತಿಭಟನೆ!

 ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಜುಲೈ 21ರಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿಚಾರಣೆ ನಡೆಸಲಿದೆ. ಸೋನಿಯಾ ವಿಚಾರಣೆ ಖಂಡಿಸಿ ಕೆಪಿಸಿಸಿ ಪ್ರತಿಭಟನೆಗೆ ಕರೆ ನೀಡಿದೆ.

ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ನಡೆಸಿತ್ತು.

ಅಂದು ಸಹ ಕೆಪಿಸಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿತ್ತು. ಇದೀಗ ಮತ್ತೆ ಪ್ರತಿಭಟನೆ ಅಸ್ತ್ರ ಪ್ರಯೋಗಿಸಲು ಕೆಪಿಸಿಸಿ ಮುಂದಾಗಿದೆ.

ಗುರುವಾರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟಿಸಲಿದ್ದಾರೆ. ಸೋನಿಯಾ ಗಾಂಧಿಯನ್ನು ನೈತಿಕವಾಗಿ ಬೆಂಬಲಿಸುವ ಜೊತೆಗೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.

ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ನಗರದ ಸ್ವಾಂತ್ರ್ಯ ಉದ್ಯಾನದಿಂದ ಹಿಡಿದು ಕೆ. ಆರ್. ವೃತ್ತ, ವಿಧಾನಸೌಧ ಮುಂದಿನ ರಸ್ತೆ ಮೂಲಕ ರಾಜಭವನದ ತನಕ ಕಾಂಗ್ರೆಸ್‌ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.

ಪ್ರತಿಭಟನಾ ಮೆರವಣಿಯಲ್ಲಿ ಕಾಂಗ್ರೆಸ್‌ ಪಕ್ಷ ಸಂಸದರು, ವಿಧಾನ ಪರಿಷತ್ ಸದಸ್ಯರು, ಶಾಸಕರು, ಕಾರ್ಯಕರ್ತರು ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ರೀತಿ ದೆಹಲಿಯಲ್ಲಿಯೂ ಸಹ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಲಿದೆ.

error: Content is protected !!