ಇಂದಿನಿಂದ 9ದಿನಗಳ ಕಾಲ ನೈಟ್ ಕಫ್ರ್ಯೂ೯

ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇದೀಗತಾನೆ ಘೋಷಿಸಿದ್ದಾರೆ.

ಇಂದಿನಿಂದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ.

ರಾತ್ರಿ 9ರನಂತರ ಬಸ್ ಸಂಚಾರ ಇರೋದಿಲ್ಲ. ಹೋಟೆಲ್, ರೆಸ್ಟೋರೆಂಟ್ಗಳೂ ಬಂದ್ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5ಗಂಟೆಯೊಳಗೆ ನೈಟ್ಕರ್ಫ್ಯೂ ಸಂಬಂಧಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ.

error: Content is protected !!