ಇಂಧನ ಬೆಲೆ ಇಳಿಕೆ ಸಾಧ್ಯತೆ!

ನವದೆಹಲಿ: ದೇಶದ ಹಲವು ಭಾಗದಲ್ಲಿ ಪೆಟ್ರೋಲ್ ಬೆಲೆ 100 ರೂ.ಗಿಂತಲೂ ಹೆಚ್ಚಾಗಿದೆ. ಭಾರಿ ಏರಿಕೆ ಕಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಬಗ್ಗೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಸಿಹಿಸುದ್ದಿ ನೀಡಿದ್ದಾರೆ.

ಚಳಿಗಾಲದ ನಂತರ ಇಂಧನ ಬೆಲೆ ಇಳಿಯಲಿದೆ ಎಂದು ಅವರು ಹೇಳಿದ್ದಾರೆ. ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ಇಂಧನ ಬೆಲೆ ಇಳಿಕೆಯಾಗಲಿದೆ. ಚಳಿಗಾಲದಲ್ಲಿ ಬೇಡಿಕೆ ಹೆಚ್ಚಾಗಿರುವುದರಿಂದ ದರ ಜಾಸ್ತಿಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಬೆಲೆ ದೇಶೀಯ ಗ್ರಾಹಕರ ಮೇಲೆ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಶುಕ್ರವಾರ ದೇಶದ ಹಲವೆಡೆ ಪ್ರತಿಭಟನೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದ ಧರ್ಮೇಂದ್ರ ಪ್ರಧಾನ್, ಇಂಧನ ಬೆಲೆ ಚಳಿಗಾಲದ ನಂತರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

error: Content is protected !!