ಇನ್ನು ಮುಂದೆ ಮಹಿಳೆಯರ ಹೆಸರಿನಲ್ಲಿ ನಿರಾಶ್ರಿತರ ವಸತಿ:ವಿ.ಸೋಮಣ್ಣ


ಕೊಡಗು: 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಹಾಕತ್ತೂರು ಬಳಿಯ ಬಿಳಿಗೇರಿಯಲ್ಲಿ 22 ಮತ್ತು ಗಾಳಿಬೀಡು ಗ್ರಾಮದ ಬಳಿ ನಿಮಿ೯ಸಿರುವ 140 ಒಟ್ಟು 162 ಮನೆಗಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಸತಿ ಸಚಿವರಾದ ವಿ.ಸೋಮಣ್ಣ ಹಸ್ತಾಂತರಿಸಿದರು.ಸಚಿವರು ಮಾತನಾಡಿ ಈಗಾಗಲೇ ಮೊದಲ ಹಂತದಲ್ಲಿ ಕರ್ಣಂಗೇರಿಯಲ್ಲಿ 35 ಮನೆಗಳು, ಮಾದಾಪುರದ ಜಂಬೂರಿನಲ್ಲಿ 383, ಮದೆನಾಡು ಬಳಿ 80 ಮನೆಗಳು ಸೇರಿದಂತೆ ಒಟ್ಟು ಮೂರು ಹಂತದಲ್ಲಿ 660 ಮನೆಗಳನ್ನು ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ. ಉಳಿದಂತೆ ಕೆ.ನಿಡುಗಡೆ ಗ್ರಾ.ಪಂ.ಯ ಆರ್ಟಿಒ ಕಚೇರಿ ಬಳಿ 76 ಮನೆಗಳ ನಿಮಾ೯ಣ ಕಾರ್ಯ ಪ್ರಗತಿಯಲ್ಲಿದ್ದು, ಎರಡು ತಿಂಗಳಲ್ಲಿ ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಹೇಳಿದರು.
ಇಡೀ ರಾಜ್ಯದಲ್ಲಿಯೇ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ 9.85 ಲಕ್ಷ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಮಾದರಿ ಮನೆಗಳನ್ನು ನಿಮರ್ಿಸಲಾಗಿದೆ ಎಂದು ಸಚಿವರು ಹೇಳಿದರು.ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಮನೆ ನೀಡುವಲ್ಲಿ ಇನ್ನು ಮುಂದೆ ಮಹಿಳೆಯರ ಹೆಸರಿಗೆ ವಸತಿ ಕಲ್ಪಿಸಲಾಗುವುದು ಎಂದು ವಸತಿ ಸಚಿವರಾದ ಸೋಮಣ್ಣ ಅವರು ಪ್ರಕಟಿಸಿದ್ದಾರೆ.

error: Content is protected !!