ಉತ್ತಮ ಕೆಲಸಗಳ ಮೂಲಕ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿ: ಸಚಿವ ಸೋಮಣ್ಣ

ಶನಿವಾರಸಂತೆ: ಡಿ.19 ಸರ್ಕಾರ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಕೋಟ್ಯಾಂತರ ರೂಪಾಯಿ ವೆಚ್ಚದ ಯೋಜನೆಗಳನ್ನು ರೂಪಿಸಿದೆ ಎಂದು ಸಚಿವ ಸೋಮಣ್ಣ ಅಭಿಪ್ರಾಯಪಟ್ಟರು. ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಂಘಟನೆ ಹಾಗೂ ಗ್ರಾಮ
ಪಂಚಾಯಿತಿ ಅಭ್ಯರ್ಥಿಗಳ ಶುಭ ಹಾರೈಕೆ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ,
ಸದುಪಯೋಗಪಡಿಸಿಕೊಳ್ಳಬೇಕು.ಉತ್ತಮ ಕೆಲಸಗಳ ಮೂಲಕ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಒಳ್ಳೆಯ ಹೆಸರು ಸಂಪಾದಿಸಿ ಎಂದು ಸಚಿವರು ಶುಭ ಹಾರೈಸಿದರು.
ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಮಾತನಾಡಿ, ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಅಧ್ಯಕ್ಷ ಭಾರತೀಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ಸಿಜಮ್ಮ, ಪ್ರಮುಖ ಮನು ರ, ಸ್ಥಳೀಯ ಮುಖಂಡರು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.