fbpx

ಉದ್ಯೋಗಾವಕಾಶವಿದೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಸ್‌ಬಿಐ ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಅಕ್ಟೋಬರ್ 8,2020ರೊಳಗೆ ಅರ್ಜಿ ಸಲ್ಲಿಸಬೇಕು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ: ಎಸ್‌ಬಿಐ ನೇಮಕಾತಿಯ ವಿವಿಧ ಹುದ್ದೆಗಳಿಗೆ ಪದವಿ, ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ: ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಬಿಐ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ: ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/- ರೂ ವೇತನ ಸಿಗಲಿದೆ. ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/- ರೂ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಎಸ್‌ಬಿಐನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು. ನಂತರ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಸೂಕ್ತವಾದವರನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪ.ಜಾ/ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ. ನೀಡಲಾಗಿರುವ ಮಾಹಿತಿಯನ್ನು ಸರಿಯಾಗಿ ನಂತರ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

error: Content is protected !!