ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸದಲ್ಲಿ ಬದಲಾವಣೆ

ಕೊಡಗು: ಜಿಲ್ಲಾ ಪ್ರವಾಸ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮೇ 14 ರಿಂದ ನಾಲ್ಕು ದಿನಗಳ ಕಾಲ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಾನ್ಯ ಸಚಿವರು ಮೇ 14 ರಂದು ಸಂಜೆ 3 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ 4.30 ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ 5.30 ಗಂಟೆಗೆ ಗಾಳಿಬೀಡು ಬಳಿಯ ನವೋದಯ ವಿದ್ಯಾಲಯದಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಮೇ 15 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆ ಹಾಗೂ ಆತ್ರೇಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಕುಟ್ಟ ಗ್ರಾಮದಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಹಾಗೆಯೇ ಚೆಕ್‍ಪೋಸ್ಟ್‍ಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಗೋಣಿಕೊಪ್ಪದ ಲೋಪಮುದ್ರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಲಿದ್ದಾರೆ. ಸಂಜೆ 4.15 ಗಂಟೆಗೆ ಪಾಲಿಬೆಟ್ಟದಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.
ಮೇ 16 ರಂದು ಬೆಳಗ್ಗೆ 9.45 ಗಂಟೆಗೆ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಲಿದ್ದಾರೆ.

ಮಧ್ಯಾಹ್ನ 11 ಗಂಟೆಗೆ ಸೋಮವಾರಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಲಿದ್ದಾರೆ. ಮೇ 17 ರಂದು ಬೆಳಗ್ಗೆ 9 ಗಂಟೆಗೆ ನಗರದಲ್ಲಿ ತರಕಾರಿ ಹಾಗೂ ದಿನಸಿ ಪದಾರ್ಥಗಳ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಸಲಿದ್ದಾರೆ.

error: Content is protected !!