ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಸಿ ಎಂ ಬೊಮ್ಮಾಯಿ

ಬೆಂಗಳೂರು:- ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆಗೆ ಭೇಟಿ ಮಾಡಿದರು.
ರಾಜ್ಯಸಭಾ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಆಶಿಸಿದರು.

ಸಚಿವರಾದ ಆರ್‌. ಅಶೋಕ್, ವಿ.‌ಸೋಮಣ್ಣ, ಬೈರತಿ ಬಸವರಾಜ್, ಮುನಿರತ್ನ, ಗೋಪಾಲಯ್ಯ ಜೆ.ಸಿ. ಮಾಧುಸ್ವಾಮಿಯವರು ಈ ಸಂದರ್ಭದಲ್ಲಿ ಹಾಜರಿದ್ದರು.
ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ‘ದೇವೇಗೌಡರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಬಹಳ ಆತ್ಮೀಯವಾಗಿ, ಲವಲವಿಕೆಯಿಂದ ಮಾತನಾಡಿದ್ದಾರೆ. ಸಾಕಷ್ಟು ಹಳೆಯ ವಿಚಾರಗಳನ್ನು ಮೆಲಕು ಹಾಕಿದರಲ್ಲದೆ ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂಬ ನಿಟ್ಟಿನಲ್ಲಿ ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ, ನೂರ್ಕಾಲ ಚೆನ್ನಾಗಿ ಬಾಳಲಿ. ರಾಜ್ಯಕ್ಕೆ ಅವರಿಂದ ಇನ್ನಷ್ಟು ಮಾರ್ಗದರ್ಶನ ಸಿಗುವಂತಾಗಲಿ ಎಂದು ತಿಳಿಸಿದರು

error: Content is protected !!