fbpx

ಎನ್.ಎಸ್.ಎಸ್ ಘಟಕದ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರಮದಾನ ಕಾರ್ಯ

ಮಡಿಕೇರಿ , 14: ಮಂಗಳೂರು ವಿಶ್ವವಿದ್ಯಾನಿಲಯ , ರಾಷ್ಟ್ರೀಯ ಸೇವಾ ಯೋಜನೆ , ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ನಗರಸಭಾ ಹಿರಿಯ ಪ್ರಾಥಮಿಕ ಶಾಲೆ, ಹಿಲ್ ರಸ್ತೆಯಲ್ಲಿ 2021-22 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ದಿನಾಂಕ 15/06/22 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಆರನೇ ದಿನವಾದ ಇಂದು ರಾಷ್ಟ್ರೀಯ ಸೇವಾ ಯೋಜನೆಯ ಶಿಭಿರಾರ್ಥಿಗಳು ನಗರದ ಪದವಿ ಪೂರ್ವ ಕಾಲೇಜು ಮಡಿಕೇರಿ ಇಲ್ಲಿ ಶ್ರಮದಾನ ಕಾರ್ಯವನ್ನು ನಡೆಸಲಾಯಿತು. ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಅವರು , ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ನಿರ್ಮಲ ಅವರು , ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಶಶೀಧರ್ , ಪ್ರಥಮ ದರ್ಜೆ ಕಾಲೇಜಿನ ಅಧೀಕ್ಷಕರಾದ ದಯಾನಂದ್ ಎನ್. ಎಲ್ ಸೇರಿದಂತೆ ಇತರರು ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಯಾದ ಶ್ರೀ ಪ್ರಕಾಶ್ ಎಂ. ಎನ್ , ಸಹ ಶಿಬಿರಾಧಿಕಾರಿಗಳಾದ ಎವರೆಸ್ಟ್ ರೋಡ್ರಿಗಸ್ ಅವರೂ ಸೇರಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಪಾಲ್ಗೊಂಡಿದ್ದರು.

  • ದೀಕ್ಷಿತ್ ಪಟ್ಟಡ
error: Content is protected !!