fbpx

ಎಸ್ಸಿ-ಎಸ್ಟಿ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತ

ಬೆಂಗಳೂರು: ಎಸ್​ಸಿ-ಎಸ್​ಟಿ ಬಡ ಕುಟುಂಬಗಳಿಗೆ 75 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಬಾಬು ಜಗಜೀವನ್‌ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್‌ ಉಚಿತ ವಿದ್ಯುತ್‌ ಯೋಜನೆಯನ್ನು 75 ಯೂನಿಟ್​​​​​ಗೆ ಹೆಚ್ಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲಾಗಿದ್ದು, ಬಿಪಿಎಲ್ ಕುಟುಂಬಗಳಿಗೆ ಮಾತ್ರ ಅನ್ವಯ ಇದು ಅನ್ವಯವಾಗಲಿದೆ.

error: Content is protected !!