fbpx

ಎಸ್‍ಎಸ್‍ಎಲ್‍ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಚಾರುಲತಾ ಸೋಮಲ್ ಸೂಚನೆ

ಇದೇ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆವರು ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ 6906 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 3,462 ಬಾಲಕರು ಹಾಗೂ 3,384 ಬಾಲಕೀಯರು ಪರೀಕ್ಷೆ ಬರೆಯಲಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 2041, ಸೋಮವಾರಪೇಟೆ ತಾಲೂಕಿನಲ್ಲಿ 2,703 ಹಾಗೂ ವಿರಾಜಪೇಟೆ ತಾಲುಕಿನಲ್ಲಿ 2,162 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು,
ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ

error: Content is protected !!