ಏ.08 ರಂದು ‘ಕರ್ನಾಟಕ ಹಕ್ಕಿ ಹಬ್ಬ’ ಉದ್ಘಾಟನಾ ಕಾರ್ಯಕ್ರಮ

ಮಡಿಕೇರಿ ಏ.06:-ಅರಣ್ಯ ಇಲಾಖೆ ಹಾಗೂ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಏಪ್ರಿಲ್, 08 ರಿಂದ 10 ರವರೆಗೆ ನಡೆಯುವ ‘ಕರ್ನಾಟಕ ಹಕ್ಕಿ ಹಬ್ಬ’ 8ನೇ ಆವೃತ್ತಿ ಉದ್ಘಾಟನಾ ಕಾರ್ಯಕ್ರಮವು ಏಪ್ರಿಲ್, 08 ರಂದು ಸಂಜೆ 4.30 ಗಂಟೆಗೆ ನಗರದ ಕ್ರಿಸ್ಟಲ್ ಕೋರ್ಟ್‍ನಲ್ಲಿ ನಡೆಯಲಿದೆ.

ಅರಣ್ಯ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ವಿಶ್ವನಾಥ ಕತ್ತಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಎಸ್.ರವಿಕುಶಾಲಪ್ಪ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಮದನ್ ಗೋಪಾಲ್, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ ಇತರರು ಪಾಲ್ಗೊಳ್ಳಲಿದ್ದಾರೆ.
ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ವಿಜಯ್ ಕುಮಾರ್ ಗೋಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅಭಿವೃದ್ಧಿ) ರಾಜೀವ್ ರಂಜನ್, ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಮನೋಜ್ ಕುಮಾರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ ಮುಖ್ಯಸ್ಥರು) ಆರ್.ಕೆ.ಸಿಂಗ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಮೌಲ್ಯಮಾಪನ, ಕಾರ್ಯ ಯೋಜನೆ, ಸಂಶೋಧನೆ ಮತ್ತು ತರಬೇತಿ ಹಾಗೂ ಹವಾಮಾನ ಬದಲಾವಣೆ) ಮಧು ಶರ್ಮಾ, ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ(ಪರಿಸರ) ವಿಜಯ ಮೋಹನ್ ರಾಜ್ ವಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಇತರರು ಪಾಲ್ಗೊಳ್ಳಲಿದ್ದಾರೆ.

error: Content is protected !!