ಕಠಿಣ ನಿಲುವು ಕೈಗೊಂಡ ಸಿ.ಎಂ ಯೋಗಿ ಆದಿತ್ಯನಾಥ್!

ಲಖನೌ: ತಮ್ಮ ಕಠಿಣ ನಿರ್ಧಾರಗಳಿಂದಲೇ ದೇಶಾದ್ಯಂತ ಸುದ್ದಿಯಾಗುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈಗ ಅಂಥಹದ್ದೇ ಮತ್ತೊಂದು ಕ್ರಮಕ್ಕೆ ಮುಂದಾಗಿದ್ದಾರೆ.

ರಸ್ತೆಗಳನ್ನು ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಲಾಗಿರುವ ಎಲ್ಲಾ ಧಾರ್ಮಿಕ ಕಟ್ಟಡಗಳನ್ನೂ ತೆರವುಗೊಳಿಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.

ಈ ರೀತಿಯಾಗಿ ನಿರ್ಮಿಸಲಾಗಿರುವ ಎಲ್ಲಾ ಧಾರ್ಮಿಕ ಕಟ್ಟಡಗಳನ್ನೂ ತಕ್ಷಣವೇ ತೆರವುಗೊಳಿಸಬೇಕೆಂಬ ಆದೇಶ ನೀಡಲಾಗಿದೆ. ಉತ್ತರ ಪ್ರದೇಶ ಗೃಹ ಇಲಾಖೆ ಮಾ.11 ರಂದು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿಗೂ ಈ ಆದೇಶದ ಸುತ್ತೋಲೆಯನ್ನು ರವಾನೆ ಮಾಡಲಾಗಿದ್ದು, ರಸ್ತೆಗಳನ್ನು ಅತಿಕ್ರಮಿಸಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ.

error: Content is protected !!