ಕನ್ನಡ ಸುವರ್ಣ ಸಮುಚ್ಚಯ ಭವನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಅಧ್ಯಕ್ಷರು

ಮಡಿಕೇರಿ ಸೆ.21:-ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಕನ್ನಡ ಸುವರ್ಣ ಸಮುಚ್ಚಯ ಭವನ ಕಟ್ಟಡ ಕಾಮಗಾರಿಯನ್ನು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಈಗಾಗಲೇ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹಾಗೆಯೇ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 3.70 ಕೋಟಿ ರೂ. ಬಿಡುಗಡೆಯಾಗಿದ್ದು, ಒಟ್ಟು 8.7 ಕೋಟಿ ರೂ. ಬಿಡುಗಡೆಯಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಮೊತ್ತಕ್ಕೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸ್ಪಷ್ಟ ನಿರ್ದೇಶನ ನೀಡಿದರು.

ಸುವರ್ಣ ಕನ್ನಡ ಸಮುಚ್ಚಯ ಭವನದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಹಾಗೆಯೇ ಸಭಾಭವನ ಒಳಗೊಂಡಿದ್ದು, ಆದಷ್ಟು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಡಾ.ಸೋಮಶೇಖರ್ ಅವರು ಸೂಚಿಸಿದರು.

ಕೊಡಗು ಜಿಲ್ಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 2011-12 ರಿಂದ 2021-22 ರವರೆಗೆ 662.50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಕನ್ನಡ ಸುವರ್ಣ ಸಮುಚ್ಚಯ ಭವನ ಕಾಮಗಾರಿಯನ್ನು ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.
ಅಕಾಡೆಮಿ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಸಹಿಸುತ್ತಿದ್ದು, ತುಂಬಾ ತೊಂದರೆಯಾಗಿದೆ. ಗ್ರಂಥಾಲಯ, ಕಚೇರಿ, ಸಭಾಭವನ ಮತ್ತಿತರ ಕಾರ್ಯ ಚಟುವಟಿಕೆಗೆ ಕಚೇರಿ ಅತ್ಯಗತ್ಯವಾಗಿ ಬೇಕಿದೆ ಎಂದು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‍ಗಳಾದ ಚೆನ್ನಕೇಶವ, ಸತೀಶ, ತಹಶೀಲ್ದಾರ್ ಮಹೇಶ್, ಇತರರು ಇದ್ದರು.

error: Content is protected !!