fbpx

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆ

ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸುವ ಭರವಸೆಯ ಹಿನ್ನಲೆಯಲ್ಲಿ ಶಂಕರ್ ದರ್ಮಣ್ಣ ಕುದರಿಮೋತಿ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ರಾಜ್ಯ ಸಂಘದ ಸಭೆಯಲ್ಲಿ ಕೊಡಗಿನ ಪತ್ರಿಕಾ ವಿತರಕರು ಈರ್ವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಕೊಡಗಿನ ಮಡಿಕೇರಿಯಲ್ಲಿ ಸತತ ಮೂವತ್ತೆಂಟು ವರ್ಷಗಳಿಂದ ಪತ್ರಿಕಾ ವಿತರಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿವಪ್ರಸಾದ್ ಭಟ್ ಹಾಗು ಸತೀಶ್ ಟಿ.ಜಿ ಅವರನ್ನು ರಾಜ್ಯ ಸಮಿತಿಯ ನಿರ್ದೇಶಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಚಿತ್ರದುರ್ಗದಲ್ಲಿ ನಡೆದ ರಾಜ್ಯ ಸಮಿತಿಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.

error: Content is protected !!