ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳು ನಡೆಯಿತು


ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಮಡಿಕೇರಿ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಅಂತ್ಯೋದಯ ಕುರಿತ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಡಿಕೇರಿ ವಿಧಾನ ಕ್ಷೇತ್ರದ ಶಾಸಕ ಅಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ, ಎಂ.ಎಲ್ಸಿ ಗಳಾದ ಸುಜಾಕುಶಾಲಪ್ಪ, ವೀಣಾ ಅಚ್ಚಯ್ಯ ಪಾಲ್ಗೊಂಡಿದ್ದರು.