ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ!

ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೂಬನಕೊಲ್ಲಿಯಲ್ಲಿ ಕಾಡಾನೆಯೊಂದು ದಾಳಿ ಮಾಡಿ ಮಹಿಳೆಯನ್ನು ಬಲಿ ತೆಗೆದುಕೊಂಡಿದೆ…!

ತೋಟದ ಲೈನ್ ಮನೆಯಲ್ಲಿ ವಾಸವಾಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿದೆ. ಕಾಡಾನೆ ದಾಳಿಯಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಮಡಿಕೇರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ್ದ ಸಂದರ್ಭ ಕಾಡಾನೆ ದಾಳಿಗೆ ಬಲಿ.
ಕಾರ್ಮಿಕ ಮಹಿಳೆ ಲಕ್ಷ್ಮಿ (70) ಮೃತ ದುರ್ದೈವಿ .
ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

ಕಾಡಾನೆ ದಾಳಿ ಘಟನೆ ಖಂಡಿಸಿ, ಕಾರ್ಮಿಕರಿಂದ ಪ್ರತಿಭಟನೆ ನಡೆಯುತ್ತಿದೆ. ಶಾಶ್ವತವಾಗಿ ಕಾಡಾನೆ ಹಾವಳಿ ತಡೆಗೆ ಒತ್ತಾಯಿಸಿ ಪ್ರತಿಭಟಿಸಲಾಗುತ್ತಿದೆ.

error: Content is protected !!