fbpx

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನ ಪರಿಷತ್ತಿನ (ಸ್ಥಳೀಯ ಸಂಸ್ಥೆಗಳು) ದ್ವೈವಾರ್ಷಿಕ ಚುನಾವಣೆಯ ಸಂಬಂಧ ಮತ ಎಣಿಕೆ ಡಿಸೆಂಬರ್, ೧೪ ರಂದು ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಮತ ಎಣಿಕೆ ನಡೆಯುವ ದಿನದಂದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಸೆಕ್ಷನ್ ೧೪೪ ಮತ್ತು ೧೪೪(ಎ)ರಡಿ ದತ್ತವಾದ ಅಧಿಕಾರದಂತೆ ಡಿಸೆಂಬರ್, ೧೪ ರಂದು ಬೆಳಗ್ಗೆ ೬ ಗಂಟೆಯಿಂದ ಮಧ್ಯರಾತ್ರಿ ೧೨ ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.

ಮತ ಎಣಿಕೆ ಕೇಂದ್ರವಾದ ಮಡಿಕೇರಿಯ ಸಂತ ಜೋಸೆಫರ ಶಾಲೆ ಆವರಣದೊಳಗೆ ಸಂಬಂಧ ಪಡದ / ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಿದೆ. ಮತ ಎಣಿಕೆ ನಡೆಯುವ ಕೇಂದ್ರದ ೫ ಕಿ.ಮೀ. ವ್ಯಾಪ್ತಿಯಲ್ಲಿ ನಿಯಮಬಾಹಿರ ಒಗ್ಗೂಡುವಿಕೆ, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಸರ್ಕಾರದ ಕೋವಿಡ್-೧೯ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾದಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

error: Content is protected !!