ಕಿಡಿಗೇಡಿಗಳಿಂದ ಬೈಕಿಗೆ ಬೆಂಕಿ

ಕುಶಾಲನಗರ ತಾಲ್ಲೂಕಿನ ನೆಲ್ಯುದಿಕೇರಿ ಯಲ್ಲಿ ಕಿಡಿಗೇಡಿಗಳು ಮನೆಯ ಮುಂದೆ ನಿಲ್ಲಿಸಿದ್ದ ಬೈಕಿಗೆ ಬೆಂಕಿ ಹಚ್ಚಿದ ಘಟನೆ ಕುಂಬಾರಗುಂಡಿಯಲ್ಲಿ ನಡೆದಿದೆ.

ಇಲ್ಲಿನ ಸುಭಾಷ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕ್ ಇದಾಗಿದ್ದು, ಕಳೆದ ರಾತ್ರಿ ಕೃತ್ಯ ನಡೆಸಿದ್ದಾರೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.