ಕುಂಭಮೇಳದ ಯಾತ್ರಿಗಳಿಗೆ 14 ದಿನ ಕ್ವಾರಂಟೈನ್ ಕಡ್ಡಾಯ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ, ಮಧ್ಯಪ್ರದೇಶ ಹಾಗೂ ಒಡಿಶಾ ಸೇರಿದಂತೆ ಅನೇಕ ರಾಜ್ಯಗಳು ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಕುಂಭಮೇಳದಿಂದ ಹಿಂದಿರುಗುವು ಯಾತ್ರಿಗಳಿಗೆ 14 ದಿನಗಳ ಹೋಮ್​ ಕ್ವಾರಂಟೈನ್​ ಕಡ್ಡಾಯಗೊಳಿಸಿದೆ.

ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ ಪಾಲ್ಗೊಂಡ ಯಾತ್ರಿಗಳು ತಮ್ಮಷ್ಟಕ್ಕೆ ತಾವೇ 14 ದಿನ ಕ್ವಾರಂಟೈನ್​ ಆಗಬೇಕೆಂದು ದೆಹಲಿ ಸರ್ಕಾರ ತಿಳಿಸಿದ್ದು, ಯಾರಾದರೂ ನಿಯಮ ಉಲ್ಲಂಘಿಸಿದರೆ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಏಪ್ರಿಲ್ 4 ಮತ್ತು 17ರ ನಡುವೆ ನಡೆದ ಕುಂಭಮೇಳದಲ್ಲಿ ವಿವಿಧ ರಾಜ್ಯಗಳ ಅನೇಕ ಯಾತ್ರಿಗಳು ಪಾಲ್ಗೊಂಡಿದ್ದಾರೆ. ದೆಹಲಿಯಿಂದ ಹೋಗಿ ಮೇಳದಲ್ಲಿ ಪಾಲ್ಗೊಂಡವರು ತಮ್ಮ ಮಾಹಿತಿಯನ್ನು ಸರ್ಕಾರದ ವೆಬ್ಸೈಟ್ ನೀಡಬೇಕೆಂದು ಹೇಳಿದೆ.

ಭೇಟಿ ನೀಡಿರುವವರು ಯಾರಾದರೂ ತಮ್ಮ ಮಾಹಿತಿಯನ್ನು ಅಪ್‌ಲೋಡ್ ಮಾಡಲು ವಿಫಲವಾದರೆ, ಅವರನ್ನು ಎರಡು ವಾರಗಳವರೆಗೆ ಸಾಂಸ್ಥಿಕ ಸಂಪರ್ಕ ತಡೆ ಕೇಂದ್ರಕ್ಕೆ ಕಳುಹಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ.

ಕರೊನಾ ಹರಡುತ್ತಿರುವುದರಿಂದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸುವಂತೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟ ಬೆನ್ನಲ್ಲೇ ಕುಂಭಮೇಳವನ್ನು ಮುಕ್ತಾಯಗೊಳಿಸಲಾಗುವುದು ಎಂದು ಜುನಾ ಅಖಾಡದ ಸ್ವಾಮಿ ಅವದೇಶಾನಂದ ಗಿರಿ ಅವರು ಘೋಷಣೆ ಮಾಡಿದ್ದಾರೆ.

ಇನ್ನು ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ. ಈಗಾಗಲೇ ಅಲ್ಲಿ 2000 ಜನಕ್ಕೂ ಹೆಚ್ಚು ಕೋವಿಡ್ ಸೋಂಕು ತಗುಲಿದೆ. ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಬಹುದು ಎಂಬ ಆತಂಕವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕುಂಭಮೇಳವನ್ನು ರದ್ದು ಮಾಡುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿ ಬಂದಿದ್ದವು. ನಿನ್ನೆ ಒಂದೇ ದಿನ ಭಾರತದಲ್ಲಿ 2 ಲಕ್ಷಕ್ಕೂ ಅಧಿಕ ಕರೊನಾವೈರಸ್ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದವು.

error: Content is protected !!