ಕೂಡಿಗೆ ಕ್ರೀಡಾ ಶಾಲೆಯಲ್ಲಿಸ್ವಾತಂತ್ರ್ಯ ಅಮೃತ ಮಹೋತ್ಸವ

ಸ್ವಾತಂತ್ರೋತ್ಸವದ ‘ಆಜಾದಿ ಕಾ ಅಮೃತ ಮಹೋತ್ಸವʼ ಕಾರ್ಯಕ್ರಮವು ಭಾರತದ ಸ್ವಾತಂತ್ರ್ಯ ಚಳವಳಿಯು ಯುವ ಸಮುದಾಯದಲ್ಲಿ ಸ್ಫೂರ್ತಿ ತುಂಬುವ ಗುರಿ ಹೊಂದಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಹಾಗೂ ಜಿಲ್ಲಾ ರಾಷ್ಟ್ರೀಯ ಹಸಿರು ಪಡೆಯ ಸಹಯೋಗದೊಂದಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢಶಾಲೆಯಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಸಂಭ್ರಮದ ಅಂಗವಾಗಿ ಸ್ವಾತಂತ್ರ್ಯ : 75 ರ ಸಂಭ್ರಮ’ ಕುರಿತು “ನಮ್ಮ ನಡೆ ಹಸಿರೆಡೆಗೆ – ಜನರೆಡೆಗೆ ಸ್ವಾತಂತ್ರ್ಯದ ನಡಿಗೆ’ ಕುರಿತು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಆಚರಣೆಯ ಮಹತ್ವ ಕುರಿತು ಮಾತನಾಡಿದರು.