ಕೆರೆ ಜಾಗ ತೆರವು

ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಅರೆಯೂರು ಗ್ರಾಮದಲ್ಲಿ ಒತ್ತುವರಿಯಾಗಿದ್ದ ಕೆರೆ ಜಾಗವನ್ನು ತಹಶೀಲ್ದಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಒತ್ತುವರಿ ತೆರುವುಗೊಳಿಸಲಾಯಿತು.

ಗ್ರಾಮದ ಕೆಲವು ವ್ಯಕ್ತಿಗಳು ಕೃಷಿ ಸೇರಿದಂತೆ ವಿವಿಧ ಉದ್ದೇಶಕ್ಕಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಸಿಕ್ಕ ದೂರಿನ ಮೇರೆಗೆ ಕಂದಾಯ ಇಲಾಖೆಯಿಂದ ಸರ್ವೆ ಕಾರ್ಯ ನಡೆಸಿ ಒತ್ತುವರಿ ನಡೆದಿರುವುದು ದೃಡಪಟ್ಟಿದ್ದು, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ರವರ ಆದೇಶದ ಮೇರೆಗೆ ತಹಶೀಲ್ದಾರ್ ಗೋವಿಂದರಾಜು, ಕಂದಾಯ, ಸರ್ವೆ, ಪೊಲೀಸ್ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಯ ಅಧಿಕಾರಿಗೂ ಸಮ್ಮುಖದಲ್ಲಿ ತೆರವು ಕಾರ್ಯ ನಡೆಸಲಾಯಿತು.