ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ಮುಂದೂಡಿಕೆ

ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಇವರ ಸಂಯಕ್ತಾಶ್ರಯದಲ್ಲಿ ಆಗಸ್ಟ್, 14 ರಂದು ಮಡಿಕೇರಿ ತಾಲ್ಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆಯಬೇಕಿದ್ದ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳನ್ನು ಕೋವಿಡ್-19 ಸಾಂಕ್ರಾಮಿಕ ಪಿಡುಗಿನಿಂದಾಗಿ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಸರ್ಕಾರದ ನಿಯಮಾನುಸಾರ ತಿಳಿಸಲಾಗುವುದು. ಎಲ್ಲಾ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಸಹಕರಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ತಿಳಿಸಿದ್ದಾರೆ.