ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಬೆಲೆಯನ್ನು ಮತ್ತಷ್ಟು ಇಳಿಕೆ ಮಾಡುವ ಭರವಸೆ!

ನವದೆಹಲಿ: ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಮತ್ತು ಎಲ್ಪಿಜಿ ಬೆಲೆಯನ್ನು ಮತ್ತಷ್ಟು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ತಿಳಿಸಿದ್ದಾರೆ.

ಪೆಟ್ರೋಲ್ ಡೀಸೆಲ್ ಮತ್ತು ಎಲ್ಪಿಜಿ ಬೆಲೆ ಕಡಿಮೆಯಾಗಲು ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಇಳಿಕೆಯಾಗುತ್ತಿದೆ. ನಾವು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತೇವೆ ಎಂದು ಮೊದಲ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎಲ್ಪಿಜಿ ದರದಲ್ಲಿ ಪ್ರತಿ ಸಿಲಿಂಡರ್ ಗೆ 10 ರೂ. ಕಡಿತ ಮಾಡಿವೆ. ಇದಾದ ಕೆಲವೇ ದಿನಗಳಲ್ಲಿ ಸಚಿವರಿಂದ ಹೇಳಿಕೆಹೊರಬಿದ್ದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗುತ್ತಿದ್ದು, ದೇಶೀಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಲಿದೆ ಎನ್ನಲಾಗಿದೆ.

error: Content is protected !!