ಕೇಂದ್ರ ತಂಡ ಆಗಮನ

ಕೊಡಗು(ಕೂಡಿಗೆ):ಕಳೆದ ತಿಂಗಳಲ್ಲಿ ಉಂಟಾದ ಮಳೆ ಹಾನಿ ವೀಕ್ಷಿಸಲು ಇಂದು ಕೇಂದ್ರ ತಂಡವು ಕೂಡಿಗೆ ಸೈನಿಕ ಶಾಲೆಯ ಹೆಲಿಪ್ಯಾಡ್ ಆಗಮಿಸಿತು. ಭಾರತ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್, ಭಾರತ ಸರ್ಕಾರದ ವಿತ್ತ ಸಚಿವಾಲಯದ ಡಾ.ಭಾರ್ತೇಂದು ಕುಮಾರ್ ಸಿಂಗ್ ಹಾಗೂ ಭಾರತ ಸರ್ಕಾರದ ಕೆ.ಎಸ್.ಡಿ.ಎಂ.ಎ. ಆಯುಕ್ತರಾದ ಮನೋಜ್ ರಂಜನ್ ಅವರು ಕೇಂದ್ರ ತಂಡದಲ್ಲಿದ್ದು, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಇತರೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ.

ನೆನ್ನೆ ದಿನವೇ ರಾಜ್ಯಕ್ಕೆ ಆಗಮಿಸಿದ ತಂಡ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ಜೊತೆ ಮಾತುಕತೆ ನಡೆಸಿದ್ದು,ಇಂದು ಕೊಡಗಿನ ಕಡಗದಾಳು ಮತ್ತು ಭಾಗಮಂಡಲ ಸುತ್ತಮುತ್ತಲಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.