ಕೇರಳ ಗಡಿಯಲ್ಲಿ ಇನ್ನೆರೆಡು ದಿನ ಟಫ್ ರೂಲ್ಸ್

ಕೇರಳದಿಂದ ಬರುವ ಗಡಿ ಭಾಗದಲ್ಲಿ ಎಲ್ಲಾ ಪ್ರಯಾಣಿಕರಿಗೆ ಸಂಪರ್ಕ ತಡೆ ಕಡ್ಡಾಯ ಮಾಡಲು ಮತ್ತು ಪ್ರತಿ ಪ್ರಯಾಣಿಕರಿಗೆ ಸಾಂಸ್ಥಿಕ ತಡೆಗೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಕೊಡಗು ಜಿಲ್ಲೆಯ ಮಾಕುಟ್ಟ, ಕುಟ್ಟ, ಕರಿಕೆಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದು,
ಕೇರಳದಲ್ಲಿ ಎರಡು ಕೋವಿಡ್ ಲಸಿಕೆ ಪಡೆದಿದ್ದರೂ ನಿಗದಿತ ಸ್ಥಳದಲ್ಲಿ 7 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದಲ್ಲದೆ ನಿಯಂತ್ರಣಕ್ಕೆ ಬಾರದಿದ್ದಲ್ಲಿ ಇನ್ನು ಎರಡು ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಮಾಡಲಾಗಿದೆ. ಕೇರಳ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಸೂಚನೆ ನೀಡಿದ್ದಾರೆ.