ಮುಸ್ಲಿಂ ವ್ಯಾಪಾರಿಗಳನ್ನು ಖಾಲಿ ಮಾಡಿಸಿದ ಭಜರಂಗದಳ ಕಾರ್ಯಕರ್ತರು…!

ಹಿಂದೂ ದೇವಾಲಯಗಳ ಆವರಣದಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಹಿಂದೂ ಸಂಘಟನೆಗಳ ಆಗ್ರಹ ಇದೀಗ ಕೊಡಗು ಜಿಲ್ಲೆಗೂ ವಿಸ್ತರಿಸಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯ ಸಮೀಪದ ಅಂಕನಹಳ್ಳಿಯ ಶ್ರೀ ಕ್ಷೇತ್ರ ತಪೋವನ ಮನೆಹಳ್ಳಿ ಮಠದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಸಾವಯವ ಕೃಷಿ ಮತ್ತು ಕುಲಗೋವುಗಳ ಸಮ್ಮೇಳನದ ಸಂದರ್ಭ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮುಸ್ಲಿಂ ಸಮುದಾಯದವರ ಅಂಗಡಿಗಳನ್ನು ಭಜರಂಗದಳದ ಕಾರ್ಯಕರ್ತರು ಶುಕ್ರವಾರ ಖಾಲಿ ಮಾಡಿಸಿದ್ದಾರೆ.

ಸಮ್ಮೇಳನದಲ್ಲಿ ವ್ಯಾಪಾರಕ್ಕೆಂದು ಬಂದಿದ್ದ ಮುಸ್ಲಿಂ ಸಮುದಾಯದ ಕೆಲವು ವ್ಯಾಪರಿಗಳು ಆಟಿಕೆ ಸಾಮಾನು, ಕಬ್ಬಿನ ಹಾಲು ಮತ್ತು ತಿಂಡಿ ತಿನಿಸುಗಳ ಅಂಗಡಿ ಹಾಕಿದ್ದರು.

ವಿಷಯ ತಿಳಿದ ಸೋಮವಾರಪೇಟೆ ಪ್ರಖಂಡದ ಭಜರಂಗದಳ ಕಾರ್ಯಕರ್ತರು ಸ್ಥಳಕ್ಕಾಗಮಿಸಿ ಮುಸ್ಲಿಂ ಸಮುದಾಯದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ತೆರವುಗೊಳಿಸಿದರಲ್ಲದೆ, ಹಿಂದೂ ವ್ಯಾಪಾರಿಗಳನ್ನು ಕರೆಸಿ ಅಂಗಡಿ ಹಾಕಿಸಿದರು.

ಗೋವುಗಳನ್ನು ಕಡಿದು ತಿನ್ನುವ ಅವರು ಗೋ ಸಮ್ಮೇಳನಕ್ಕೆ ಯಾಕೆ ಬರಬೇಕು. ಗೋವುಗಳ ಕಡಿದು ತಿನ್ನುವವರಿಗೆ ಇಲ್ಲಿ ವ್ಯಾಪಾರ ಮಾತ್ರ ಬೇಕಾ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭ ಭಜರಂಗದಳದ ಸೋಮವಾರಪೇಟೆ ತಾಲೂಕು ಸಂಚಾಲಕ ಜೀವನ್ ನೇಗಳ್ಳಿ ಅವರು ಮಾತಾನಾಡಿ, ಹಿಂದೂಗಳು ಜಾತ್ರೆ ಕಾರ್ಯಕ್ರಮಗಳನ್ನು ನಡೆಸುವ ಸಂದರ್ಭದಲ್ಲಿ ಮುಸ್ಲಿಮರು ಪಾಲ್ಗೊಂಡು ವ್ಯಾಪಾರ ನಡೆಸುತ್ತಿದ್ದಾರೆ. ಇವರು ನಡೆಸುವ ಧಾರ್ಮಿಕ ಸ್ಥಳಗಳಲ್ಲಿ ವ್ಯಾಪಾರ ವಹಿವಾಟು ನಡೆಸಿಕೊಳ್ಳಲಿ. ಆದರೆ ನಮ್ಮ ಕಾರ್ಯಕ್ರಮಗಳಲ್ಲಿ ಅವರು ಬರುವುದು ಬೇಡ. ಇದು ಅವರಿಗೆ ಎಚ್ಚರಿಕೆ ಗಂಟೆ ಎಂದು ತಿಳಿಸಿದರು.

error: Content is protected !!