ಕೊಡಗಿಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಗಳು

ಕೊಡಗು ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ನಂಜುಂಡೇಗೌಡ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಡಾ.ನಂಜುಂಡೇಗೌಡ ಅವರು ಇದುವರೆಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಡಳಿತಾಧಿಕಾರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದುವರೆಗೆ (ಸುಮಾರು ೧೧ ತಿಂಗಳು) ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ರಾಜು ಮೊಗವೀರ ಅವರು ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

error: Content is protected !!