ಕೊಡಗಿಗೆ ಭೇಟಿ ನೀಡಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾಜಿ ಸಿ.ಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನತ್ತ ಮೊಟ್ಟೆ ಎಸೆದು ಕಪ್ಪು ಪಟ್ಟಿ ಪ್ರದರ್ಶಿಸಿದ ಬೆನ್ನಲ್ಲೇ ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರುವಿನಲ್ಲಿ ಕಾರಿನ ಮುಂಭಾಗದ ಗಾಜಿನ ಮೇಲೆ ಬಿಜೆಪಿಯ ಕಾರ್ಯಕರ್ತ ಮೊಟ್ಟೆ ಎಸೆದಿದ್ದಾನೆ.

ಈ ನಡುವೆ ಕೆಲವರು ಕಲ್ಲನ್ನೂ ಎಸೆಯಲು ಮುಂದಾಗಿದ್ದರು. ಪೊಲೀಸರು ಕಲ್ಲೆಸತ ತಪ್ಪಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

error: Content is protected !!