ಕೊಡಗಿನಲ್ಲಿ ಇನ್ನೊಂದು ತಿಂಗಳು ವಾರಾಂತ್ಯ ಕರ್ಫ್ಯೂ ಮುಂದುವರಿಕೆ

ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆ ಇಲ್ಲದಿರುವ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅದ್ದೂರಿ ಗಣೇಶೋತ್ಸವಕ್ಕೆ ಅವಕಾಶ ನೀಡುವುದಿಲ್ಲ. ಕೇರಳದ ಗಡಿ ಕೊಡಗು, ದಕ್ಷಿಣಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗೆ ಅನ್ವಯಿಸಲಿದೆ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಕೇರಳದಿಂದ ಆಗಮಿಸುವವರಿಗೆ 7 ದಿನ ಕಡ್ಡಾಯ ಕ್ವಾರಂಟೈನ್, ಗಡಿ ತಪಾಸಣೆ ಕಡ್ಡಾಯ ಎಂದು ತಿಳಿಸಿದೆ.ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟಂಬರ್ ಅಂತ್ಯದವರೆಗೆ ವಾರಾಂತ್ಯದ ಕರ್ಪ್ಯೂ ಮುಂದುವರೆಯಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಪ್ಯೂವನ್ನು ಸಡಿಸಲಾಗಿದೆ. ರಾಜ್ಯಾದ್ಯಂತ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಈ ಕುರಿತು ರಾಜ್ಯ ಸರಕಾರ ಆದೇಶ ಹೊರಡಿಸಿದೆ.