ಕೊಡಗಿನಲ್ಲಿ184 ಹೊಸ ಕೊರೋನಾ ಸೋಂಕು ದೃಡ: ಪಾಸಿಟಿವಿಟಿ ದರ ಶೇ.11.84ಕ್ಕೆ ಜಿಗಿತ

ಜಿಲ್ಲೆಯಲ್ಲಿ ಭಾನುವಾರ ಮತ್ತೆ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 184 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಪಾಸಿಟಿವಿಟಿ ದರ ಶೇ.11.84ಕ್ಕೆ ಜಿಗಿದಿದೆ.

ಭಾನುವಾರ ಮಡಿಕೇರಿ ತಾಲೂಕಿನಲ್ಲಿ 48, ಸೋಮವಾರಪೇಟೆ ತಾಲೂಕಿನಲ್ಲಿ 71 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 65 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ._
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 27,983ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 153 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಸೋಂಕಿನಿಂದ ಮುಕ್ತರಾದವರ ಸಂಖ್ಯೆ 26,721ರಷ್ಟಿದೆ.

ಭಾನುವಾರ ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಇದರೊಂದಿಗೆ ಸತ್ತವರ ಸಂಖ್ಯೆ 356ಕ್ಕೆ ಏರಿಕೆಯಾಗಿದ್ದರೆ, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 906 ಹಾಗೂ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 169ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

error: Content is protected !!