ಕೊಡಗು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮಡಿಕೇರಿ ಆ.13:-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಆಗಸ್ಟ್ 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ 76 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ಅವರು ತಿಳಿಸಿದ್ದಾರೆ.

error: Content is protected !!