fbpx

ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

2021ನೇ ಸಾಲಿನ ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಖ್ಯಾತ ಅಂತರರಾಷ್ಟ್ರೀಯ ಟೆನಿಸ್ ಆಟಗಾರರಾದ ಶ್ರೀ ರೋಹನ್ ಬೋಪಣ್ಣರವರು ಇಂದು ಪೂರ್ವಾಹ್ನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ನಿವೃತ್ತ ಸೇನಾಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ರೀಡಾಕೂಟವು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯಲಿದ್ದು ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ, ವೃತ್ತ ಕಚೇರಿ, ಡಿವೈ.ಎಸ್.ಪಿ. ಕಚೇರಿ, ಜಿಲ್ಲಾ ಸಶಸ್ತ್ರದಳ ಮತ್ತು ಇತರೆ ಘಟಕಗಳ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ. ದಿನದ 24 ಗಂಟೆಯೂ ಹಗಲಿರುಳೆನ್ನದೆ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮತ್ತು ಅವರ ಕುಟುಂಬದ ಒತ್ತಡ ನಿವಾರಣೆ, ಮಾನಸಿಕ ಸ್ಥೈರ್ಯ ಹಾಗು ಜೀವನೋಲ್ಲಾಸವನ್ನು ಹೆಚ್ಚಿಸುವ ಪ್ರಯತ್ನವಾಗಿ ಪ್ರತಿವರ್ಷವೂ ಪೊಲೀಸ್ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದ್ದು ದಿನಾಂಕ 8-12-2021ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ದಕ್ಷಿಣವಲಯ ಪೊಲೀಸ್ ಮಹಾ ನಿರೀಕ್ಷಕರಾದ ಶ್ರೀ ಪ್ರವೀಣ್ ಮಧುಕರ್ ಪವಾರ್, ಐಪಿಎಸ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

error: Content is protected !!