ಕೊಡಗು ಜಿಲ್ಲೆಯಲ್ಲಿ ಸೋಮವಾರ 19 ಹೊಸ ಕೋವಿಡ್-19 ಪ್ರಕರಣ


ಕೊಡಗು: ಜಿಲ್ಲೆಯಲ್ಲಿ ಸೋಮವಾರ 19 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 19 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ 01 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 01 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ 15 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 15 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 03 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 03 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 30,046 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 165 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 28,767 ಮಂದಿ ಗುಣಮುಖರಾಗಿದ್ದಾರೆ. 902 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 02 ಸಾವು ಉಂಟಾಗಿದ್ದು, ಒಟ್ಟು 377 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 158 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.6.12 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!