ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)

ಮಡಿಕೇರಿ ಸೆ.13(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 15.21 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 32.22 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 3106.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2340.26 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.23 ಮಿ.ಮೀ. ಕಳೆದ ವರ್ಷ ಇದೇ ದಿನ 38.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4496.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3253.67 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.83 ಮಿ.ಮೀ. ಕಳೆದ ವರ್ಷ ಇದೇ ದಿನ 27.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2404.37 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1898.17 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 30.92 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2419.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1868.94 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 12.60, ನಾಪೋಕ್ಲು 5.20, ಸಂಪಾಜೆ 13.50, ಭಾಗಮಂಡಲ 25.60, ವಿರಾಜಪೇಟೆ ಕಸಬಾ 10, ಹುದಿಕೇರಿ 59.80, ಶ್ರೀಮಂಗಲ 17.20, ಪೊನ್ನಂಪೇಟೆ 25, ಅಮ್ಮತ್ತಿ 6, ಬಾಳೆಲೆ 13, ಸೋಮವಾರಪೇಟೆ ಕಸಬಾ 7.20, ಶನಿವಾರಸಂತೆ 7.20, ಶಾಂತಳ್ಳಿ 28, ಕೊಡ್ಲಿಪೇಟೆ 13.20, ಕುಶಾಲನಗರ 0.80, ಸುಂಟಿಕೊಪ್ಪ 1 ಮಿ.ಮೀ. ಮಳೆಯಾಗಿದೆ.


ಹಾರಂಗಿ ಜಲಾಶಯದ ನೀರಿನ ಮಟ್ಟ (13-09-2022) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.83 ಅಡಿಗಳು. ಕಳೆದ ವರ್ಷ ಇದೇ ದಿನ 2858.33 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.20 ಮಿ.ಮೀ., ಕಳೆದ ವರ್ಷ ಇದೇ ದಿನ 12.80 ಮಿ.ಮೀ. ಇಂದಿನ ನೀರಿನ ಒಳಹರಿವು 2712 ಕ್ಯುಸೆಕ್, ಕಳೆದ ವರ್ಷ ಇದೇ ದಿನ 3928 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 775 ಕ್ಯುಸೆಕ್. ನಾಲೆಗೆ 925 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 3368 ಕ್ಯುಸೆಕ್. ನಾಲೆಗೆ 600 ಕ್ಯುಸೆಕ್.

error: Content is protected !!