fbpx

ಕೊಡಗು ಯುವಸೇನೆ ವತಿಯಿಂದ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ತೇಜಸ್ವಿ ಸೂರ್ಯ ಅವರಿಗೆ ಕೊಡಗು ಯುವಸೇನೆ ವತಿಯಿಂದ ಸನ್ಮಾನಿಸಿ ಶುಭ ಹಾರೈಸಲಾಯಿತು.ಬೆಂಗಳೂರಿನ ಸಂಸದರ ಕಚೇರಿಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಕೊಡಗು ಯುವಸೇನೆ ಕೊಡಗಿನಲ್ಲಿ ಬಲಿಷ್ಠವಾಗಿ ಬೆಳೆಯಲಿ ಎಂದು ಅವರು ಶುಭ ಹಾರೈಸಿದರು. ಕೊಡಗಿಗೆ ಭೇಟಿ ನೀಡಿ ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಯುವ ಸೇನೆ ಪ್ರಮುಖರಾದ ಕುಲದೀಪ್ ಪೂಣಚ್ಚ, ಮಾಚೆಟ್ಟಿರ ಸಚಿನ್ ಮಂದಣ್ಣ, ಭರತ್, ದೇವಯ್ಯ ಇನ್ನಿತರ ಕಾರ್ಯಕರ್ತರು ಹಾಜರಿದ್ದರು.

error: Content is protected !!